ಬೆಂಗಳೂರು: ಉಗ್ರರಿಗೆ ವಿಕೃತ ಕಾಮಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಸಿಗುತ್ತಿರುವ ವಿಡಿಯೋಗಳು ವೈರಲ್ ಆಗುತ್ತಿದ್ದಂತೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಈ ಹಿಂದೆ ಲಾನ್ ನಲ್ಲಿ ಕುಳಿತು ರೌಡಿ ಶೀಟರ್ ಗಳೊಂದಿಗೆ ಟೀ ಕುಡಿಯುತ್ತಿದ್ದ ಫೋಟೋ, ಮೊಬೈಲ್ ವಿಡಿಯೋ ಕಾಲ್ ನಲ್ಲಿ ಮಾತನಾಡಿದ ವಿಡಿಯೋ ಬಹಿರಂಗವಾಗಿತ್ತು. ಆ ವಿಚಾರ ಸುದ್ದಿಯಾಗುತ್ತಿದ್ದಂತೇ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು.
ಇದೀಗ ದರ್ಶನ್ ಜಾಮೀನು ರದ್ದಾಗಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಲ್ಲಿ ಹಾಸಿಗೆ, ದಿಂಬು ನೀಡುವಂತೆ ಕೇಳಿದರೂ ಕೊಡದೇ ಸತಾಯಿಸುತ್ತಿದ್ದಾರೆ. ಹೀಗಾಗಿ ದರ್ಶನ್ ಬಗ್ಗೆ ಇಷ್ಟೆಲ್ಲಾ ಕಠಿಣ ಧೋರಣೆ ತಾಳುವ ಕಾನೂನು ವ್ಯವಸ್ಥೆ, ಸರ್ಕಾರಗಳು ಈಗ ಉಗ್ರರು, ವಿಕೃತ ಕಾಮಿ ಜೈಲಿನಲ್ಲಿ ಬಿಂದಾಸ್ ಆಗಿ ಮೊಬೈಲ್ ಬಳಸುತ್ತಿರುವ ವಿಡಿಯೋ ಬಹಿರಂಗವಾದರೂ ಮೌನವಾಗಿರುವುದು ಯಾಕೆ ಎಂದು ದರ್ಶನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಾಗಿದ್ದರೆ ದರ್ಶನ್ ಈ ಉಗ್ರರಿಗಿಂತಲೂ ಕಡೆಯಾ? ದರ್ಶನ್ ಅಪರಾಧ ಇನ್ನೂ ಸಾಬೀತಾಗಿಲ್ಲ. ಆದರೂ ಅವರನ್ನು ಕಠಿಣವಾಗಿ ನಡೆಸಿಕೊಳ್ಳಲಾಗುತ್ತಿದೆ. ಆದರೆ ದರ್ಶನ್ ಗಿರುವ ಕಠಿಣ ನಿಯಮಗಳು ಇವರಿಗೆ ಯಾಕೆ ಅನ್ವಯವಾಗಲ್ಲ ಎಂದು ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.