Publish Date: Tue, 11 Jun 2024 (14:45 IST)
Updated Date: Tue, 11 Jun 2024 (14:52 IST)
ಬೆಂಗಳೂರು: ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗುತ್ತಿದ್ದಂತೇ ಇತ್ತ ಅವರ ಕೆಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮೆಚ್ಚಿನ ನಟನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.
ದರ್ಶನ್ ತಮ್ಮ ಆಪ್ತೆ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ಸಂಗಡಿಗರೊಂದಿಗೆ ಸೇರಿಕೊಂಡು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎಂಬುದು ಆರೋಪ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಮತ್ತು ಸಂಗಡಿಗರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಇತ್ತ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಮೇಲಿನ ಅಭಿಮಾನದಿಂದ ಕೆಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಒಬ್ಬ ಸೋಷಿಯಲ್ ಮೀಡಿಯಾ ಬಳಕೆದಾರ ಅಂತೂ ಆತನೇ ಏನೋ ತಪ್ಪು ಮಾಡಿರ್ತಾನೆ. ಅದಕ್ಕೆ ನಮ್ಮ ಬಾಸ್ ಶಿಕ್ಷೆ ಕೊಟ್ಟಿದ್ದಾರೆ ಎಂದು ಬರೆದುಕೊಂಡಿದ್ದಾನೆ.
ಮತ್ತೆ ಕೆಲವರು ನಮ್ಮ ಬಾಸ್ ಏನೂ ತಪ್ಪು ಮಾಡಿರಲ್ಲ. ಎಂದರೆ ಮತ್ತೊಬ್ಬ ಬಳಕೆದಾರ ಪವಿತ್ರಾ ಗೌಡಗಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧ ನಮ್ಮ ಬಾಸ್ ಎಂದು ಬರೆದುಕೊಂಡಿದ್ದಾರೆ. ಮತ್ತೆ ಕೆಲವರು ದರ್ಶನ್ ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಲು ಸಾಧ್ಯವೇ ಇಲ್ಲ ಎಂದು ಬರೆದುಕೊಂಡಿದ್ದಾರೆ.