Webdunia - Bharat's app for daily news and videos

Install App

ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಗೆ ಟೆನ್ಷನ್: ಜೈಲು ಅಧಿಕಾರಿಗಳ ಮುಂದೆ ಮತ್ತೊಂದು ಬೇಡಿಕೆ

Krishnaveni K
ಬುಧವಾರ, 4 ಸೆಪ್ಟಂಬರ್ 2024 (11:38 IST)
ಬೆಂಗಳೂರು: ಒಂದೆಡೆ ಪೊಲೀಸರು ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತಿದ್ದಂತೆ ಇತ್ತ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ಟೆನ್ಷನ್ ಶುರುವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನಲೆಯಲ್ಲಿ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ದರ್ಶನ್ ಈ ಜೈಲಿನಲ್ಲಿ ಏಕಾಂಗಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಂತೆ ಇಲ್ಲಿ ಅವರಿಗೆ ಯಾವುದೇ ವಿಶೇಷ ಸೌಲಭ್ಯಗಳು ಸಿಗುತ್ತಿಲ್ಲ. ಟಿವಿ ವ್ಯವಸ್ಥೆಯೂ ಇಲ್ಲ.

ಹೀಗಾಗಿ ದರ್ಶನ್ ಗೆ ಚಾರ್ಜ್ ಶೀಟ್ ನಲ್ಲಿ ಏನಾಗುತ್ತಿದೆ ಎಂಬ ಆತಂಕ ಶುರುವಾಗಿದೆ. ಈ ಕಾರಣಕ್ಕೆ ತಮ್ಮ ಮನೆಗೆ ಕರೆ ಮಾಡಿ ವಿಷಯ ತಿಳಿದುಕೊಳ್ಳಲು ಹಂಬಲಿಸುತ್ತಿದ್ದಾರೆ. ಇದಕ್ಕಾಗಿ ಫೋನ್ ಮಾಡಲು ಅವಕಾಶ ಕೊಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರಂತೆ.

ವಿಚಾರಣಾಧೀನ ಖೈದಿಗಳಿಗೆ ವಾರದಲ್ಲಿ ಮೂರು ಬಾರಿ ಕರೆ ಮಾಡಲು ಅವಕಾಶವಿದೆ. ಈ ಸಂಖ್ಯೆಗಳನ್ನು ಮೊದಲೇ ಜೈಲು ಅಧಿಕಾರಿಗಳಿಗೆ ನೀಡಬೇಕಾಗುತ್ತದೆ. ಅದರಂತೆ ದರ್ಶನ್ ಈಗ ಚಾರ್ಜ್ ಶೀಟ್ ನಲ್ಲಿ ಏನೆಲ್ಲಾ ಉಲ್ಲೇಖವಾಗಿದೆ ಎಂದು ತಿಳಿದುಕೊಳ್ಳಲು ಮನೆಗೆ ಕರೆ ಮಾಡಲು ಬಯಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments