ಜಾಮೀನು ಪ್ರತಿ ಸಿಕ್ಕ ಕೂಡಲೇ ದರ್ಶನ್‌ಗೆ ಬಿಡುಗಡೆ ಭಾಗ್ಯ: ಬಳ್ಳಾರಿ ಜೈಲಿನಲ್ಲಿ ಸಿದ್ಧತೆ ಹೇಗಿದೆ

sampriya
ಬುಧವಾರ, 30 ಅಕ್ಟೋಬರ್ 2024 (14:20 IST)
Photo Credit X
ಬಳ್ಳಾರಿ: ಚಿತ್ರದುರ್ಗಾದ ರೇಣಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಆರು ವಾರಗಳ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಅದರ ಬೆನ್ನಲ್ಲೇ ದರ್ಶನ್‌ ಇರುವ ಬಳ್ಳಾರಿ ಜೈಲಿನಲ್ಲಿ ಚಟುವಟಿಕೆ ಗರಿಗೆದರಿದೆ. ಜಾಮೀನು ಪ್ರತಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸಂಜೆ 6.30ರ ಒಳಗಾಗಿ ತಲುಪದರೆ ದರ್ಶನ್‌ ಅವರನ್ನು ಇಂದೇ ಬಿಡುಗಡೆ ಮಾಡಲಾಗುವುದು ಎಂದು ಜೈಲು ಅಧೀಕ್ಷಕಿ ಲತಾ ತಿಳಿಸಿದ್ದಾರೆ.

ಇಂದು ಸಂಜೆ 6.30ಕ್ಕೆ ಜೈಲನ್ನು ಲಾಕಪ್‌ ಮಾಡುತ್ತೇವೆ. ಅಷ್ಟರ ಒಳಗಾಗಿ ನಮಗೆ  ಜಾಮೀನು ಪ್ರತಿ ತಲುಪಬೇಕು. ಒಂದು ವೇಳೆ ಸಂಜೆ 6.30ರ ನಂತರ ಸಿಕ್ಕರೆ ನಾಳೆಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಒಂದೋ, ನ್ಯಾಯಾಲಯದ ಅಧಿಕೃತ ಇ–ಮೇಲ್‌ ಐಡಿಯಿಂದ ನಮಗೆ ಜಾಮೀನು ಪ್ರತಿ ಸಿಗಬೇಕು. ಇಲ್ಲವೇ ಕುಟುಂಬಸ್ಥರಾದರೂ ಖುದ್ದಾಗಿ ತಂದು ಹಾಜರುಪಡಿಸಬೇಕು. ಜಾಮೀನು ಪ್ರತಿ ಸಿಕ್ಕ ಕೂಡಲೇ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಗುರುವಾರದಿಂದ ನಾಲ್ಕು ದಿನ ಸರ್ಕಾರಿ ರಜೆ ಇರುವುದರಿಂದ ದರ್ಶನ್‌ ಬಿಡುಗಡೆ ತಡವಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ವಿಚಾರಣಾಧೀನ ಕೈದಿಗಳನ್ನು ಕೋರ್ಟ್‌ ಹೇಳಿದ ಕೂಡಲೇ ಬಿಡುಗಡೆ ಮಾಡಬೇಕಾಗುತ್ತದೆ. ಸರ್ಕಾರಿ ರಜೆಗಳು ಇವರಿಗೆ ಅನ್ವಯವಾಗುವುದಿಲ್ಲ’ ಎಂದೂ ಅವರೂ ಸ್ಪಷ್ಪಪಡಿಸಿದರು.

ದರ್ಶನ್‌ಗೆ ಜಾಮೀನು ಮಂಜೂರಾಗುತ್ತಲೇ ಇತ್ತ ಬಳ್ಳಾರಿ ಜೈಲು ಬಳಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಸುದ್ದಿ ತಿಳಿದ ಅವರ ಅಭಿಮಾನಿಗಳು ಒಬ್ಬೊಬ್ಬರಾಗಿಯೇ ಜೈಲಿನ ಬಳಿಗೆ ಬರಲಾರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments