Webdunia - Bharat's app for daily news and videos

Install App

ಬಳ್ಳಾರಿ ಕಾರಾಗೃಹಕ್ಕೆ ಇಂದು ದರ್ಶನ್‌ ಸ್ಥಳಾಂತರ ಸಾಧ್ಯತೆ: ಜೈಲು ಬಳಿ ಅಭಿಮಾನಿಗಳ ದಂಡು

Sampriya
ಬುಧವಾರ, 28 ಆಗಸ್ಟ್ 2024 (14:22 IST)
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಹೀಗಾಗಿ, ನಟನನ್ನು ನೋಡಲು ಬಳ್ಳಾರಿ ಜೈಲು ಬಳಿ ಅಭಿಮಾನಿಗಳ ದಂಡೇ ಸೇರಿದೆ.

ಬಳ್ಳಾರಿ ಕಾರಾಗೃಹಕ್ಕೆ ನಟ ದರ್ಶನ್‌ ಅವರನ್ನು  ಸ್ಥಳಾಂತರ ಮಾಡಲು ನ್ಯಾಯಾಲಯ ಮಂಗಳವಾರ ಅನುಮತಿ ನೀಡಿತ್ತು. ಬಹುತೇಕ ಇಂದು ಸಂಜೆ ಅಥವಾ ರಾತ್ರಿ ಹೊತ್ತಿಗೆ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಕರೆತರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ವಿಷಯ ತಿಳಿದ ಅಭಿಮಾನಿಗಳು ಬುಧವಾರ ಮುಂಜಾನೆಯಿಂದಲೇ ಜೈಲು ಬಳಿಗೆ ಬರುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ನಟ ದರ್ಶನ್ ಮೇಲಿನ ಆರೋಪಗಳ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮ ನೆಚ್ಚಿನ ನಟನನ್ನು ನೋಡಲು ಇಲ್ಲಿ ಬಂದಿದ್ದೇವೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ರಾಜಾತಿಥ್ಯ ಹಿನ್ನೆಲೆ ದರ್ಶನ್‌ ತೂಗುದೀಪ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಉಳಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಉಳಿದ ಆರೋಪಿಗಳನ್ನು ಕೂಡ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments