Publish Date: Sat, 14 Nov 2020 (09:44 IST)
Updated Date: Sat, 14 Nov 2020 (13:11 IST)
ಬೆಂಗಳೂರು: ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.
ಕಿಚ್ಚ ಸುದೀಪ್ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ರಾಬರ್ಟ್ ಸಿನಿಮಾ ಪೋಸ್ಟರ್ ಜತೆಗೆ ದೀಪಾವಳಿ ಹಬ್ಬಕ್ಕೆ ವಿಶ್ ಮಾಡಿದ್ದಾರೆ. ಇವರಲ್ಲದೆ ಅನೇಕ ನಟ-ನಟಿಯರೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಕ್ಕೆ ಶುಭ ಕೋರಿದ್ದಾರೆ.