Publish Date: Wed, 28 Oct 2020 (09:36 IST)
Updated Date: Wed, 28 Oct 2020 (09:38 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆ ಬಗ್ಗೆ ಊಹಾಪೋಹಗಳ ಬೆನ್ನಲ್ಲೇ ಡಿ ಬಾಸ್ ಸ್ವತಃ ಸ್ಪಷ್ಟನೆ ನೀಡಿದ್ದಾರೆ.
ಲಾಕ್ ಡೌನ್ ಮುಗಿದು ಚಿತ್ರರಂಗ ಸಹಜ ಸ್ಥಿತಿಗೆ ಬರುತ್ತಿರುವುದು ಖುಷಿ ತಂದಿದೆ. ಆದರೆ ಅವಸರದಲ್ಲಿ ರಾಬರ್ಟ್ ರಿಲೀಸ್ ಮಾಡಲ್ಲ. ಎಲ್ಲಾ ಸರಿ ಹೋದ ಮೇಲೆ ರಾಬರ್ಟ್ ರಿಲೀಸ್ ಆಗಲಿದೆ’ ಎಂದು ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೂ ಮೊದಲು ರಾಬರ್ಟ್ ಡಿಸೆಂಬರ್ 25 ರಂದು ಬಿಡುಗಡೆಯಾಗಬಹುದು ಎಂಬ ಸುದ್ದಿ ಹಬ್ಬಿತ್ತು.