ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.
ಕರ್ನಾಟಕ ಹೈಕೋರ್ಟ್ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈಗಾಗಲೇ ಸುಪ್ರೀಂಕೋರ್ಟ್ ಎರಡೂ ಕಡೆ ವಕೀಲರ ವಾದ-ವಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಪ್ರಮುಖ ಆರೋಪಿಗಳ ಹಿನ್ನಲೆ ಕೇಳಿತ್ತು. ಬಳಿಕ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ ಎಂದು ಹೇಳಿತ್ತು. ಹೀಗಾಗಿ ದರ್ಶನ್ ಮತ್ತು ಸಂಗಡಿಗರಿಗೆ ಜಾಮೀನು ರದ್ದಾಗುವ ಭೀತಿ ಎದುರಾಗಿದೆ.
ಸುಪ್ರೀಂಕೋರ್ಟ್ ನ ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ಪೀಠ ಇಂದು ತೀರ್ಪು ನೀಡಲಿದೆ. 2024 ರ ಜೂನ್ 9 ರಂದು ದರ್ಶನ್ ಆಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್ ಗೆ ಕರೆಸಿ ಹಲ್ಲೆ ನಡೆಸಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂಬುದು ಆರೋಪವಾಗಿದೆ.