ಬೆಂಗಳೂರು: ನಿನ್ನೆಯಷ್ಟೇ ನಿಧನರಾಧ ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ.
ಗಾಂಧೀವಾದಿಯಾಗಿದ್ದ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ.
ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ದರ್ಶನ್ ಜಿ. ಮಾದೇಗೌಡರು ನಿಧನದ ಸುದ್ದಿ ಆಘಾತ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದರ್ಶನ್ ಹೇಳಿದ್ದಾರೆ.