Webdunia - Bharat's app for daily news and videos

Install App

ಮೈಸೂರಿನಲ್ಲಿ ಸಂಕ್ರಾಂತಿ ಆಚರಿಸಲು ದರ್ಶನ್ ಪ್ಲಾನ್‌, ಕೋರ್ಟ್ ಬಳಿ ಡಿಬಾಸ್ ಬೇಡಿಕೆ ಹೀಗಿತ್ತು

Sampriya
ಶುಕ್ರವಾರ, 10 ಜನವರಿ 2025 (15:21 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾದರು. ವಿಚಾರಣೆ ವೇಳೆ ಪವಿತ್ರಾ ಗೌಡ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೋರಿದ್ದಾರೆ.

57ನೇ ಸಿಸಿಹೆಚ್‌ ನ್ಯಾಯಾಧೀಶರ ಮುಂದೆ ದರ್ಶನ್‌ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು. ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.

ಈ ಎರಡು ಅರ್ಜಿಗಳನ್ನು ಕೋರ್ಟ್‌ ಮಾನ್ಯ ಮಾಡಿದೆ. ದರ್ಶನ್‌ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿದೆ. ಹೀಗಾಗಿ ಈ ಬಾರಿ ಸಂಕ್ರಾಂತಿಯನ್ನು ಮೈಸೂರಿನಲ್ಲಿ ದರ್ಶನ್‌ ಆಚರಿಸಲಿದ್ದಾರೆ.

ಇನ್ನೂ ಪವಿತ್ರಾ ಗೌಡ ಅವರು ದೇವಸ್ಥಾನ ಹಾಗೂ ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ಹೋಗಲು ಅನುಮತಿ ಕೇಳಿದ್ದರು. ಆರ್ ಆರ್ ನಗರದಲ್ಲಿ ಇರುವ ರೆಡ್ ಕಾರ್ಪೆಟ್ ಶೋ ರೂಂಗೆ ಸಂಬಂಧಿಸಿದಂತೆ ವಸ್ತುಗಳನ್ನು ತರಲು ಅವಕಾಶ ನೀಡುವಂತೆ ಪವಿತ್ರಾ ಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು.

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments