Webdunia - Bharat's app for daily news and videos

Install App

ದರ್ಶನ್ ಕೈ ಸರ್ಜರಿ ಸಕ್ಸಸ್: ಬೇಗ ಗುಣಮುಖರಾಗಿ ಎಂದ ಫ್ಯಾನ್ಸ್‌

Sampriya
ಸೋಮವಾರ, 8 ಏಪ್ರಿಲ್ 2024 (14:07 IST)
Photo Courtesy X
ಬೆಂಗಳೂರು:  ಕೈ ನೋವಿನಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್  ದರ್ಶನ್ ಅವರಿಗೆ ಇಂದು ಯಶಸ್ವಿಯಾಗಿ ಸರ್ಜರಿ ಮಾಡಲಾಗಿದೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್‌ ಕೈಗೆ ಸರ್ಜರಿ ಮಾಡಲಾಗಿದ್ದು, ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.  ಸರ್ಜರಿ ಬಗ್ಗೆ ದರ್ಶನ್ ಅವರು ಏ.4ರಂದು ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದರು. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿ ಆಪರೇಷನ್‌ಗೆ ಒಳಗಾಗಲಿದ್ದೇನೆ ಎಂದು ತಿಳಿಸಿದ್ದರು.

'ಡೆವಿಲ್' ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ದರ್ಶನ್ ಇದೀಗ ಆಪರೇಷನ್‌  ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ನಟ ವಿಶ್ರಾಂತಿ ಪಡೆಯುತ್ತಿರುವ ವಿಚಾರ ಕೇಳಿ ಅಭಿಮಾನಿಗಳಿಗೂ ಖುಷಿಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments