Webdunia - Bharat's app for daily news and videos

Install App

ಮೈಸೂರಿನಲ್ಲೇ ದರ್ಶನ್‌ ಸಂಕ್ರಾಂತಿ ಸಡಗರ: ಬೆಕ್ಕನ್ನು ಎತ್ತಿ ಮುದ್ದಾಡಿದ ಪತ್ನಿ ವಿಜಯಲಕ್ಷ್ಮಿ

Sampriya
ಭಾನುವಾರ, 12 ಜನವರಿ 2025 (15:48 IST)
Photo Courtesy X
ಬೆಂಗಳೂರು: ನಟ ದರ್ಶನ್  ಪತ್ನಿ ವಿಜಯಲಕ್ಷ್ಮಿ ಅವರು ಇನ್‌ಸ್ಟಾಗ್ರಾಂನಲ್ಲಿಇಂದು ಮುದ್ದಾದ ಫೋಟೋ ಶೇರ್ ಮಾಡಿದ್ದಾರೆ. ಈ ಚಿತ್ರವನ್ನು ಕಂಡು ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಅವರಿಗೆ ಕೋರ್ಟ್ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ದರ್ಶನ್ ಮಕರ ಸಂಕ್ರಾತಿ ಹಬ್ಬವನ್ನು ಮೈಸೂರಿನಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಪ್ರತಿ ವರ್ಷವೂ ಸಂಕ್ರಾಂತಿಯನ್ನು ದರ್ಶನ್ ಅದ್ಧೂರಿಯಾಗಿ ಆಚರಿಸುತ್ತಾರೆ. ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಹಸುಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸುತ್ತಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರ ಜೊತೆಗೆ ಸಡಗರದಿಂದಲೇ ಸಂಕ್ರಾಂತಿಯನ್ನು ಬರಮಾಡಿಕೊಳ್ಳುತ್ತಾರೆ. ಅದರಂತೆ ಈ ವರ್ಷವೂ ಕೂಡ ಹಬ್ಬ ಆಚರಿಸಲು ದರ್ಶನ್ ಮನೆಯಲ್ಲಿ ಭರ್ಜರಿ ತಯಾರಿ ನಡೆದಿದೆ.

ದರ್ಶನ್‌ ಅವರಿಗೆ ಬೆಂಗಳೂರು ಬಿಟ್ಟು ತೆರಳಬಾರದು ಅಂತ ಕೋರ್ಟ್ ಆದೇಶ ಇರುವುದರಿಂದ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಎಲ್ಲಿ ಆಚರಿಸುತ್ತಾರೆ ಎಂಬ ಕುತೂಹಲ ಇತ್ತು. ಬೆಂಗಳೂರು ಕೋರ್ಟ್ ಜನವರಿ 12ರಿಂದ 17ರವೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿರುವುದರಿಂದ ಮೈಸೂರಿನಲ್ಲಿ ನಟ ಹಬ್ಬ ಆಚರಿಸಲಿದ್ದಾರೆ. ಈ ಬಾರಿಯೂ ಹಸು, ಕುದುರೆ, ಕುರಿ ಹಾಗೂ ಮತ್ತಿತರ ಪ್ರಾಣಿಗಳನ್ನು ಸಿಂಗರಿಸಿ ಕುಟುಂಬದೊಡನೆ ಸಂಕ್ರಾಂತಿ ಹಬ್ಬವನ್ನು ಆಚರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments