Publish Date: Sun, 31 Dec 2023 (08:45 IST)
Updated Date: Sun, 31 Dec 2023 (09:13 IST)
ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವುದು ಡಿ ಬಾಸ್ ದರ್ಶನ್ ಮೊಗದಲ್ಲಿ ನಗು ಮೂಡಿಸಿದೆ.
ಸಿನಿಮಾ ಗೆದ್ದ ಖುಷಿಯಲ್ಲಿ ದರ್ಶನ್ ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಕಾಟೇರ ಚಿತ್ರತಂಡದ ಮನತುಂಬಿದೆ. ಸ್ಪೀಚ್ ಲೆಸ್ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಬಿಡುಗಡೆಯಾಗಿದೆ. ಬಿಡುಗಡೆಯಾದ ಮೊದಲ ದಿನವೇ 19 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಕೇವಲ ಕನ್ನಡ ಭಾಷೆಯಲ್ಲಿ, ಕರ್ನಾಟಕದಲ್ಲಿ ಮಾತ್ರ ಬಿಡುಗಡೆಯಾಗಿ ಇಷ್ಟು ಮಟ್ಟದ ಗಳಿಕೆ ಮಾಡಿರುವುದು ವಿಶೇಷ. ಅದರಲ್ಲೂ ಈ ಸಿನಿಮಾದ ಕತೆ, ದರ್ಶನ್ ಅಭಿನಯಕ್ಕೆ ಎಲ್ಲಾ ವರ್ಗದ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.