ಮೈಸೂರು: ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇನ್ನು ಎರಡೇ ದಿನದಲ್ಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ದರ್ಶನ್ ಗೆ ಅಲ್ಲಿನ ಜೀವನಶೈಲಿಯಿಂದ ಹಿಂದಿನ ಬೆನ್ನು ನೋವು ಮರುಕಳಿಸಿತ್ತು. ಇದು ತೀವ್ರಗೊಂಡ ಹಿನ್ನಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದು ಆಸ್ಪತ್ರೆ ಸೇರಿದ್ದರು.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಒಂದು ತಿಂಗಳು ಚಿಕಿತ್ಸೆ ಪಡೆದ ಬಳಿಕ ರೆಗ್ಯುಲರ್ ಜಾಮೀನು ಸಿಕ್ಕ ಹಿನ್ನಲೆಯಲ್ಲಿ ಡಿಸ್ಚಾರ್ಜ್ ಆಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆದಿದ್ದರು. ಹಾಗಿದ್ದರೂ ಅವರ ಬೆನ್ನು ನೋವು ಸಂಪೂರ್ಣ ವಾಸಿಯಾಗಿಲ್ಲ.
ಈ ಹಿನ್ನಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೊಳಗಾಗುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಇಂದು ಮೈಸೂರಿನ ಆಸ್ಪತ್ರೆಗೆ ಭೇಟಿ ಕೊಟ್ಟ ದರ್ಶನ್ ಇಂಜೆಕ್ಷನ್ ಪಡೆದಿದ್ದಾರೆ. ಇಂಜೆಕ್ಷನ್ ನಲ್ಲಿ ಸರಿ ಹೋಗದೇ ಇದ್ದರೆ ಇನ್ನು ಎರಡು ದಿನದಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.