ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಂಗಕ್ಕೆ ಬಂದು ಇದೇ ಆಗಸ್ಟ್ 11 ಕ್ಕೆ 24 ವರ್ಷ ತುಂಬುತ್ತಿದೆ. ಈ ವಿಶೇಷ ದಿನವನ್ನು ಉತ್ಸವದ ರೀತಿಯಲ್ಲಿ ಆಚರಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.
ಇದಕ್ಕಾಗಿ ನಾಳೆ ಸಂಜೆ ವಿಶೇಷ ಸಿಡಿಪಿಯೊಂದು ಬಿಡುಗಡೆಯಾಗಲಿದೆ. ಇದನ್ನು ಟ್ವಿಟರ್ ನಲ್ಲಿ ಟ್ರೆಂಡ್ ಮಾಡಲು ಗಜಪಡೆ ಸಿದ್ಧವಾಗಿದೆ.
ಚಿತ್ರರಂಗದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ದರ್ಶನ್ ಗೆ ಅಭಿಮಾನಿ ಬಳಗದವರು ಜಾಸ್ತಿ. ತಮ್ಮ ಅಭಿಮಾನಿಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುವ ದರ್ಶನ್ ಗೆ ಈಗ ಅವರ ವಿಶೇಷ ದಿನಕ್ಕೆ ಅಭಿಮಾನಿಗಳೇ ಹಬ್ಬ ಮಾಡಲಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!