Select Your Language

Notifications

webdunia
webdunia
webdunia
webdunia

ಡೆವಿಲ್‌ ಶೂಟಿಂಗ್‌ ಸೆಟ್‌ಗೆ ದರ್ಶನ್‌ ನಾಳೆಯೇ ಎಂಟ್ರಿ: ಭದ್ರತೆಗಾಗಿ ₹1.64 ಲಕ್ಷ ಸುರಿದ ಚಿತ್ರತಂಡ

Challenging Star Darshan

Sampriya

ಬೆಂಗಳೂರು , ಮಂಗಳವಾರ, 11 ಮಾರ್ಚ್ 2025 (14:56 IST)
Photo Courtesy X
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನು ಪಡೆದು ಬಂದಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತೆ ಬಣ್ಣ ಹಚ್ಚಲು ಸಜ್ಜಾಗುತತಿದ್ದಾರೆ.  ಮತ್ತೆ ದಿ ಡೆವಿಲ್ ಶೂಟಿಂಗ್‌ಗೆ ದರ್ಶನ್‌ ಎಂಟ್ರಿ ಕೊಡಲಿದ್ದಾರೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಭದ್ರತೆಗಾಗಿ ಭಾರೀ ಮೊತ್ತ ಹಣವನ್ನು ಚಿತ್ರತಂಡ ಖರ್ಚು ಮಾಡಿದೆ. ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಶೂಟಿಂಗ್ ಮತ್ತೆ ಚಾಲನೆ ಸಿಗಲಿದೆ.

ಮಿಲನಾ ಪ್ರಕಾಶ್‌ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್‌ಗೆ ಜೋಡಿಯಾಗಿ ರಚನಾ ರೈ ಕಾಣಿಸಿಕೊಳ್ಳಲಿದ್ದಾರೆ. ಬಿಗ್‌ ಬಾಸ್‌ ಕನ್ನಡ 10ರ ಸ್ಪರ್ಧಿ ವಿನಯ್‌ ಗೌಡ ಕೂಡ  ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಇದೇ 12ರಿಂದ 15ರವರೆಗೆ ಮೈಸೂರಿನಲ್ಲಿ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ. 12ರಿಂದ 14ರವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಚಿತ್ರತಂಡ, 15ರಂದು ಲಲಿತಮಹಲ್ ಪ್ಯಾಲೆಸ್‌ನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಲಾಗಿದೆ.

ಚಿತ್ರತಂಡದ ಮನವಿಯಂತೆ ಮೈಸೂರು ನಗರದ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದಾರೆ. ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಟನ ಭದ್ರತೆಗಾಗಿ ಸಿಬ್ಬಂದಿ ನಿಯೋಜಿಸಲು ₹1.64 ಲಕ್ಷ ಚಿತ್ರತಂಡ ಪಾವತಿಸಿದೆ.

10 ತಿಂಗಳ ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್ ಅವರನ್ನು ಮೈಸೂರಿನಲ್ಲಿ  ಬಂಧನವಾಗಿತ್ತು. ಡೆವಿಲ್ ಸಿನಿಮಾಗೆ ಚಿತ್ರೀಕರಣಕ್ಕೆಂದು ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದ ವೇಳೆ ದರ್ಶನ್ ಅವರನ್ನು ಬಂಧಿಸಲಾಗಿತ್ತು.



Share this Story:

Follow Webdunia kannada

ಮುಂದಿನ ಸುದ್ದಿ

ನಟ ದರ್ಶನ್ ಶೂಟಿಂಗ್ ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ