Webdunia - Bharat's app for daily news and videos

Install App

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ದ ದರ್ಶನ್: ಯೋಗೇಶ್ವರ ಸ್ಪೋಟಕ ಹೇಳಿಕೆ

Sampriya
ಶುಕ್ರವಾರ, 14 ಜೂನ್ 2024 (15:23 IST)
Photo Courtesy X
ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಟ ದರ್ಶನ್‌ ಅವರನ್ನು ಕಾಂಗ್ರೆಸ್‌ನಿಂದ ನಿಲ್ಲಿಸಲು ಡಿ.ಕೆ. ಸಹೋದರರು ಸಿದ್ಧತೆ ನಡೆಸಿದ್ದರು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಹಾಕ್ತೇವೆ ಎಂದಿದ್ದ ಡಿ.ಕೆ. ಸುರೇಶ್ ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರ ಅಚ್ಚರಿ ಅಭ್ಯರ್ಥಿ ಇದೀಗ ಜೈಲುಪಾಲಾಗಿದ್ದಾರೆ. ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿ.ಕೆ. ಸಹೋದರರು ಪ್ಲ್ಯಾನ್‌ ಮಾಡಿದ್ದರು ಎಂದರು.

ಆ ವ್ಯಕ್ತಿ ಯಾರು ಅಂತ ನೀವೇ ಊಹೆ ಮಾಡಿಕೊಳ್ಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ದರ್ಶನ್‌‌ ಸ್ಪರ್ಧೆಗೆ ಬಯಸಿದ್ದರು ಅನ್ನೋ ಸುಳಿವು ಬಿಟ್ಟುಕೊಟ್ಟಿದ್ದಾರೆ.

ದರ್ಶನ್ ಮೇಲೆ ಕೊಲೆ ಆರೋಪ ಕುರಿತು ಮಾತನಾಡಿ, ಈ‌ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಎನಿಸುತ್ತಿದೆ. ಪಾಪ ಅವರಿಗೆ ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗೋಗಿದೆ. ಮುಂದೆ ಏನಾಗುತ್ತೋ ನೋಡೊಣ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments