ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

Krishnaveni K
ಬುಧವಾರ, 10 ಡಿಸೆಂಬರ್ 2025 (09:48 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಸಹ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಜೈಲಿನಲ್ಲಿ ತಮ್ಮ ಸಹಚರರೊಂದಿಗೆ ಕಿತ್ತಾಡಿಕೊಂಡಿದ್ದಾರೆ. ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಅವರ ಕಾಟ ತಡೆಯಲಾಗದೇ ಸಹಚರರು ಬೇರೆ ಸೆಲ್ ಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು.

ಆದರೆ ಈಗ ಈ ಎಲ್ಲಾ ಆರೋಪಗಳಿಗೆ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ. ಈ ಆರೋಪಗಳು ಸಂಪೂರ್ಣ ಸುಳ್ಳು ಎಂದಿದ್ದಾರೆ. ‘ಇಂದು ಜೈಲಿಗೆ ಭೇಟಿ ನೀಡಿದಾಗ ಅಧಿಕಾರಿಗಳೊಂದಿಗೆ, ನನ್ನ ಪತಿಯೊಂದಿಗೆ ಮತ್ತು ಅವರಿಂದ ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಗಳೊಂದಿಗೆ ಮಾತನಾಡಿದ್ದೇನೆ. ಎಲ್ಲವನ್ನೂ ನೇರವಾಗಿ ನೋಡಿ ಅರ್ಥ ಮಾಡಿಕೊಳ್ಳಲು ಬಯಸಿದ್ದೆ. ಎಲ್ಲರನ್ನೂ ಕೇಳಿದ ನಂತರ ಒಂದು ವಿಷಯ ಸ್ಪಷ್ಟವಾಯಿತು. ಈ ಆರೋಪಗಳು ನಕಲಿ ಮತ್ತು ನಿರಾಧಾರ ಮತ್ತು ದುರುದ್ದೇಶದಿಂದ ಸೃಷ್ಟಿಸಿದ್ದಾಗಿದೆ’ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ದರ್ಶನ್ ಹಲ್ಲೆ ಮಾಡಿದ್ದಾರೆ, ಇತರೆ ಖೈದಿಗಳಿಗೂ ನರಕ ದರ್ಶನ ಮಾಡುತ್ತಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments