Select Your Language

Notifications

webdunia
webdunia
webdunia
webdunia

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಅವಕಾಶ ಕೇಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದಾಸನ ಬಿಡುಗಡೆಗೆ ಒತ್ತಡ ಹಾಕ್ತಾರಾ

DK Shivakumar

Krishnaveni K

ಬೆಂಗಳೂರು , ಬುಧವಾರ, 24 ಜುಲೈ 2024 (10:42 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ. ಇದನ್ನು ಸ್ವತಃ ಡಿಕೆಶಿಯೇ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ದರ್ಶನ್ ಪ್ರಕರಣದ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಚಾಮುಂಡೇಶ್ವರಿ ಕರಗ ಮಹೋತ್ಸವದ ವೇಳೆ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ. ಭಾಷಣದ ವೇಳೆ ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಕೂಗಿದ್ದಾರೆ. ಹೀಗಾಗಿ ಡಿಕೆಶಿ ಅವರ ಬಗ್ಗೆ ಮಾತನಾಡಿದರು.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಜುಲೈ 24 ಕ್ಕೆ ನನ್ನ ಭೇಟಿಗೆ ಸಮಯ ಕೇಳಿದ್ದಾರೆ. ನಾನು ಓಕೆ ಎಂದಿದ್ದೇನೆ. ಏನಾದರೂ ಅನ್ಯಾಯ ಆಗಿದ್ದರೆ  ಸರಿಪಡಿಸಬಹುದು. ಆದರೆ ಈ ನೆಲದ ಕಾನೂನಿಗೆ ಎಲ್ಲರೂ ಗೌರವ ಕೊಡಬೇಕಾಗುತ್ತದೆ.  ಅನ್ಯಾಯ ಅಗಿದ್ದರೆ ನ್ಯಾಯ ಕೊಡಿಸುವ ಪ್ರಯತ್ನ ಮಾಡೋಣ. ನೊಂದವರಿಗೆ ಆ ಚಾಮುಂಡೇಶ್ವರಿ ತಾಯಿ ಅನುಗ್ರಹ ನೀಡಲಿ ಎಂದಿದ್ದಾರೆ.

ರೇಣುಕಾಸ್ವಾಮಿ ಕೇಸ್ ನಲ್ಲಿ ಇದುವರೆಗೆ ಸರ್ಕಾರದ ಯಾವುದೇ ಸಚಿವರೂ ತಲೆ ಹಾಕಬಾರದು ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಸೂಚನೆ ನೀಡಿದ್ದರು. ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿದೆ ಎಂದಿದ್ದರು. ಇದೀಗ ವಿಜಯಲಕ್ಷ್ಮಿ ತಮ್ಮ ಗಂಡನ ಪರವಾಗಿ ಮಾತನಾಡಲು ಡಿಕೆ ಶಿವಕುಮಾರ್ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಈ ಕೇಸ್ ಮತ್ತೆ ಹಳ್ಳ ಹಿಡಿಯಬಹುದಾ ಎಂಬ ಅನುಮಾನ ಮೂಡಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ ಮಕ್ಕಳೇ ಮುಖ್ಯ ಚೆನ್ನಾಗಿ ನೋಡ್ಕೊಳ್ಳಿ ಎಂದ ದರ್ಶನ್: ದಾಸನಿಗೆ ಕೆಟ್ಟ ಮೇಲೆ ಬುದ್ಧಿ ಬಂತಾ