ಇನ್ನು ಒಂದು ತಿಂಗಳು ಸಿನಿಮಾ ಶೂಟಿಂಗ್ ಮಾಡಲ್ಲ ದರ್ಶನ್

Krishnaveni K
ಮಂಗಳವಾರ, 9 ಏಪ್ರಿಲ್ 2024 (14:09 IST)
ಬೆಂಗಳೂರು: ಕೈ ನೋವಿಗೆ ಸರ್ಜರಿಗೊಳಗಾಗಿರುವ ನಟ ದರ್ಶನ್ ಇನ್ನು ಒಂದು ತಿಂಗಳು ಕಾಲ ಯಾವುದೇ ಸಿನಿಮಾ ಶೂಟಿಂಗ್ ಗಳಲ್ಲಿ ಭಾಗಿಯಾಗಲ್ಲ.

ಡೆವಿಲ್ ಸಿನಿಮಾ ಶೂಟಿಂಗ್ ವೇಳೆ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ಆರಂಭವಾಗಿತ್ತು. ಇದರ ಬೆನ್ನಲ್ಲೇ ದರ್ಶನ್ ಕೈಗೆ ಏಟು ಮಾಡಿಕೊಂಡಿದ್ದರು. ಹೀಗಾಗಿ ಶೂಟಿಂಗ್ ಸ್ಥಗಿತವಾಗಿತ್ತು. ಕಾಟೇರ ಸಕ್ಸಸ್ ಬಳಿಕ ದರ್ಶನ್ ಅಭಿನಯಿಸುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ.

ಕೈ ನೋವಿದ್ದರೂ ಇತ್ತೀಚೆಗೆ ಸುಮಲತಾ ಅಂಬರೀಶ್ ಅವರ ಮಂಡ್ಯ ಸಭೆಯಲ್ಲಿ ದರ್ಶನ್ ಪಾಲ್ಗೊಂಡಿದ್ದರು. ಆವತ್ತೇ ಶಸ್ತ್ರಚಿಕಿತ್ಸೆಗೊಳಗಾಗಬೇಕಿದ್ದರೂ ಅಮ್ಮನ ಜೊತೆಗಿರಬೇಕು ಎಂಬ ಕಾರಣಕ್ಕೆ ಸರ್ಜರಿ ಮುಂದೂಡಿ ಸುಮಲತಾ ಜೊತೆಗಿದ್ದರು.

ಇದೀಗ ದರ್ಶನ್ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಸರ್ಜರಿ ಆದ ಬೆನ್ನಲ್ಲೇ ಅವರು ಡೆವಿಲ್ ಸಿನಿಮಾ ಶೂಟಿಂಗ್ ಗೆ ಬರಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ವೈದ್ಯರು ಕಡ್ಡಾಯವಾಗಿ ಒಂದು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ ದರ್ಶನ್ ಮುಂದೆ ಒಂದು ತಿಂಗಳು ಯಾವುದೇ ಶೂಟಿಂಗ್ ನಲ್ಲಿ ಭಾಗಿಯಾಗದೇ ವಿಶ್ರಾಂತಿ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments