Publish Date: Wed, 04 Dec 2019 (11:23 IST)
Updated Date: Wed, 04 Dec 2019 (11:25 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಇದೆ.
ಡಿಸೆಂಬರ್ 12 ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೂಲಗಳ ಪ್ರಕಾರ ಸುಮಾರು 700 ಥಿಯೇಟರ್ ಗಳಲ್ಲಿ ಒಡೆಯನ ದರ್ಶನವಾಗಲಿದೆ.
ಈಗಾಗಲೇ ಟೀಸರ್, ಟ್ರೈಲರ್ ಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವ ಕಾರಣ, ಸಿನಿಮಾ ಕೂಡಾ ಒಳ್ಳೆಯ ಗಳಿಕೆ ಮಾಡಬಹುದು ಎಂಬ ಲೆಕ್ಕಾಚಾರ ಚಿತ್ರತಂಡದ್ದು. ಹೀಗಾಗಿ ಹೆಚ್ಚಿನ ಸಂಖ್ಯೆಯ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.