Select Your Language

Notifications

webdunia
webdunia
webdunia
webdunia

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

Shivanna

Krishnaveni K

ಬೆಂಗಳೂರು , ಮಂಗಳವಾರ, 29 ಜುಲೈ 2025 (14:27 IST)
ಬೆಂಗಳೂರು: ಡಿಬಾಸ್ ಫ್ಯಾನ್ಸ್ ಮತ್ತು ನಟಿ ರಮ್ಯಾ ನಡುವೆ ನಡೆಯುತ್ತಿರುವ ಕದನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಎಂಟ್ರಿಕೊಟ್ಟಿದ್ದಾರೆ. ರಮ್ಯಾ ಪರವಾಗಿ ಸಂದೇಶವೊಂದನ್ನು ಪ್ರಕಟಿಸಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಮ್ಯಾ ಪೋಸ್ಟ್ ಮಾಡಿದ್ದಕ್ಕೆ ದರ್ಶನ್ ಅಭಿಮಾನಿಗಳು ಬೇರೆ ಬೇರೆ ಖಾತೆಯಿಂದ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕಟಿಸಿ ನಿಂದಿಸಿದ್ದರು. ಇದರ ವಿರುದ್ಧ ರಮ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ.

ಇದರ ಬೆನ್ನಲ್ಲೇ ನಟ ಯುವ ರಾಜ್ ಕುಮಾರ್, ಬಿಗ್ ಬಾಸ್ ಪ್ರಥಮ್ ರಮ್ಯಾ ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಇದೀಗ ಸ್ವತಃ ಶಿವಣ್ಣ ಸೋಷಿಯಲ್ ಮೀಡಿಯಾ ಮೂಲಕ ರಮ್ಯಾ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.

ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ ಅಕ್ಕನಾಗಿ, ಮಗಳಾಗಿ ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಧ್ವೇಷ-ಅಸೂಯೆಗಳನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ’ ಎಂದು ಶಿವಣ್ಣ ಮತ್ತು ಪತ್ನಿ ಗೀತಾ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಪ್ರಕಟಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್