Select Your Language

Notifications

webdunia
webdunia
webdunia
webdunia

ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ

ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ
ಬೆಂಗಳೂರು , ಮಂಗಳವಾರ, 16 ನವೆಂಬರ್ 2021 (19:05 IST)
ಬೆಂಗಳೂರು : ನಗರದ ಅರಮನೆ ಮೈದಾನ ಅವರಣದಲ್ಲಿ ಚಿತ್ರರಂಗ ಆಯೋಜಿಸಿರುವ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು.
‘ಪುನೀತ್ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದು ಬೊಮ್ಮಾಯಿ ಹೇಳಿದರು.
ರಾಷ್ಟ್ರಮಟ್ಟದಲ್ಲಿ ಭಾರತ ರತ್ನ ಹೇಗೆ ಅತ್ಯುನ್ನತ ಪ್ರಶಸ್ತಿ ಎನಿಸಿದರೆ, ರಾಜ್ಯಮಟ್ಟದಲ್ಲಿ ಕರ್ನಾಟಕ ರತ್ನ ಅತ್ಯುನ್ನತ ಗೌರವ ಎನಿಸಿಕೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಸ್ಥಾಪಿಸಲಾಯಿತು. ಈವರಗೆ ಕೇವಲ ಎಂಟು ಮಂದಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಮರಣೋತ್ತರವಾಗಿ ಈ ಪ್ರಶಸ್ತಿ ಪಡೆಯುತ್ತಿರುವ ಪುನೀತ್ ರಾಜ್ಕುಮಾರ್ ಈ ಗೌರವಕ್ಕೆ ಪಾತ್ರರಾದ 10ನೇ ವ್ಯಕ್ತಿಯಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಓದಿಸುತ್ತಿದ್ದ ಮಕ್ಕಳನ್ನು ನಾನು ಓದಿಸುತ್ತೇನೆ: ಮತ್ತೊಮ್ಮೆ ನುಡಿದ ವಿಶಾಲ್