Select Your Language

Notifications

webdunia
webdunia
webdunia
webdunia

ಇನ್ನೊಂದು ಟ್ರೇಲರ್ ಬಿಡುಗಡೆ ಮಾಡಿದ ದೇವರ ಚಿತ್ರತಂಡ, ಜೂ.ಎನ್‌ಟಿಆರ್ ಅವತಾರಕ್ಕೆ ಫ್ಯಾನ್ಸ್‌ ಖುಷಿ

ಇನ್ನೊಂದು ಟ್ರೇಲರ್ ಬಿಡುಗಡೆ ಮಾಡಿದ ದೇವರ ಚಿತ್ರತಂಡ, ಜೂ.ಎನ್‌ಟಿಆರ್ ಅವತಾರಕ್ಕೆ ಫ್ಯಾನ್ಸ್‌ ಖುಷಿ

Sampriya

ಬೆಂಗಳೂರು , ಭಾನುವಾರ, 22 ಸೆಪ್ಟಂಬರ್ 2024 (16:57 IST)
Photo Courtesy X
ಬೆಂಗಳೂರು: ಆರ್‌ಆರ್‌ಆರ್‌ ಸಕ್ಸಸ್ ನಂತರ ಜೂನಿಯರ್ ಎನ್‌ಟಿಆರ್ ಅವರ ಬಹುನಿರೀಕ್ಷಿತ 'ದೇವರ' ಸಿನಿಮಾ ಇದೇ 27ರಂದು ಬಿಡುಗಡೆಯಾಗಲಿದೆ.

ಇದೀಗ ಸಿನಿಮಾದ ಟ್ರೇಲರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಜೂ.ಎನ್‌ಟಿಆರ್‌ ಅನ್ನು ತೆರೆ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳು ಖುಷಿಯಾಗಿದ್ದಾರೆ.

ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾದ ಟ್ರೇಲರ್ ಸಾಮಾಜಿಕ ಜಾಲತಾಣದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಿದೆ. ಕೊರಟಾಲ ಶಿವ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರದಲ್ಲಿ ಜ್ಯೂ. ಎನ್‌ಟಿಆರ್‌ ವಿಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜೂ.ಎನ್‌ಟಿಆರ್‌ಗೆ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ.

ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ವಿಲನ್ ಆಗಿ ಅಬ್ಬರಿಸಿದ್ದಾರೆ. ಈ ಚಿತ್ರಕ್ಕೆ ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್‌ ಆರ್ಟ್ಸ್‌ನಡಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಹರಿಕೃಷ್ಣ ಬಂಡವಾಳ ಹೂಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚಗೆ ಸರ್ಪ್ರೈಸ್ ನೀಡಿದ ಗೋಲ್ಡನ್ ಸ್ಟಾರ್ ದಂಪತಿ