Webdunia - Bharat's app for daily news and videos

Install App

ಬೇಷರತ್ ಕ್ಷಮೆ ಯಾಚಿಸಿದ ಧ್ರು ವ ಸರ್ಜಾ

Webdunia
ಗುರುವಾರ, 25 ಫೆಬ್ರವರಿ 2021 (09:31 IST)
ಬೆಂಗಳೂರು: ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ವಿವಾದಕ್ಕೊಳಗಾಗಿತ್ತು. ಇದೀಗ ನಾಯಕ ಧ್ರುವ ಸರ್ಜಾ ಈ ಘಟನೆ ಬಗ್ಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.


ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಧ್ರುವ ಸರ್ಜಾ ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ.  ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ, ಕೆಲಯೇ ಧರ್ಮ. ನಾವು ಎಲ್ಲಾ ಧರ್ಮಗಳನ್ನೂ ಗೌರವಿಸಿದ್ದೇವೆ. ಚಿತ್ರದ ಕತೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಇದಕ್ಕಾಗಿ ಬೇಷರತ್ ಕ್ಷಮೆ ಯಾಚಿಸುತ್ತೇನೆ. ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದ ಮೇಲೆ ನಿಮ್ಮೆದುರು ಮಾತಾಡೋಣ ಎಂದು ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ದವಿದೆ. ನಮ್ಮ ಮನವಿಯನ್ನು ಪುರಸ್ಕರಿಸಿ, ಎಂದಿನಂತೆ ನಿಮ್ಮ ಆಶೀರ್ವಾದವಿರಲಿ’ ಎಂದು ಧ್ರುವ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments