Webdunia - Bharat's app for daily news and videos

Install App

ದರ್ಶನ್ ಪ್ರಕರಣದ ಬೆನ್ನಲ್ಲೇ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

Krishnaveni K
ಮಂಗಳವಾರ, 10 ಸೆಪ್ಟಂಬರ್ 2024 (10:49 IST)
ಬೆಂಗಳೂರು: ಒಂದೆಡೆ ಸ್ಯಾಂಡಲ್ ವುಡ್ ನಲ್ಲಿ ನಟ ದರ್ಶನ್  ಪ್ರಕರಣ ಸದ್ದು ಮಾಡುತ್ತಿದ್ದರೆ ಇತ್ತ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್ ಆಗಿರುವ ಸುದ್ದಿ ಕೇಳಿಬರುತ್ತಿದೆ.

ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನಕ್ಕೊಳಗಾಗಿದ್ದಾರೆ. ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಧ್ರುವ ಮ್ಯಾನೇಜರ್ ಅಶ್ವಿನ್ ನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣ ನಡೆದಿದ್ದು ಮೇ ಕೊನೆಯ ವಾರದಲ್ಲಿ. ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬವರು ಹಲ್ಲೆ ನಡೆಸಿದ್ದರು. ಈ ಇಬ್ಬರಿಗೆ ಹಲ್ಲೆ ಮಾಡಲು ಹೇಳಿದ್ದು ಧ್ರುವ ಆಪ್ತ ನಾಗೇಂದ್ರ. ಈತನಿಗೆ ಸಾಥ್ ನೀಡಿದ್ದು ಇನ್ನೊಬ್ಬ ಆಪ್ತ ಅಶ್ವಿನ್ ಎನ್ನಲಾಗಿದೆ.

ಈ ಪ್ರಕರಣದ ಹಿನ್ನಲೆಯೇ ರೋಚಕವಾಗಿದೆ. ಪ್ರಶಾಂತ್ ಪೂಜಾರಿ ಕೂಡಾ ಧ್ರುವಗೆ ಆಪ್ತರಾಗಿದ್ದರು. ಆದರೆ ಧ್ರುವ ಜೊತೆ ಪ್ರಶಾಂತ್ ಆಪ್ತರಾಗಿರುವುದನ್ನು ಈ ಮೂವರು ಆರೋಪಿಗಳು ಸಹಿಸಿರಲಿಲ್ಲ. ಈ ಕಾರಣಕ್ಕೆ ಪ್ಲ್ಯಾನ್ ಮಾಡಿ ಹಲ್ಲೆ ನಡೆಸಿದ್ದರು. ಇದೇ ಹರ್ಷ ಹುಟ್ಟುಹಬ್ಬಕ್ಕೆ ಕಳೆದ ವರ್ಷ ಧ್ರುವ ಕಾರು ಗಿಫ್ಟ್ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಈ ವ್ಯಕ್ತಿಗಳೇ ಈಗ ಹಲ್ಲೆ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments