ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕದ ಪ್ರಕಟಣೆ ಜೊತೆಗೆ ಪ್ರತಿಜ್ಞೆ ಮಾಡಿದ ಧ್ರು ವ ಸರ್ಜಾ

Krishnaveni K
ಶನಿವಾರ, 25 ಮೇ 2024 (08:59 IST)
Photo Courtesy: Twitter
ಬೆಂಗಳೂರು: ಧ್ರುವ ಸರ್ಜಾ ನಾಯಕರಾಗಿರುವ ಬಹುನಿರೀಕ್ಷಿತ ಮಾರ್ಟಿನ್ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಪತ್ರಿಕಾಗೋಷ್ಠಿ ನಡೆಸಿದ ಚಿತ್ರತಂಡ ಅಕ್ಟೋಬರ್ 11 ಕ್ಕೆ ಸಿನಿಮಾ ರಿಲೀಸ್ ಆಗುತ್ತಿರುವುದಾಗಿ ಘೋಷಿಸಿದೆ.

ಇದರ ನಡುವೆಯೇ ನಟ ಧ್ರುವ ಸರ್ಜಾ ಹೊಸ ಪ್ರತಿಜ್ಞೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಇದರ ಜೊತೆಗೆ ಧ್ರುವ ಸರ್ಜಾ ಸಿನಿಮಾ ಬಿಡುಗಡೆಯಾಗದೇ ಮೂರು ವರ್ಷವಾಗುತ್ತಾ ಬಂದಿದೆ.

ಮಾರ್ಟಿನ್ ಸಿನಿಮಾ ರಿಲೀಸ್ ದಿನಾಂಕ ಘೋಷಿಸಿದ ಬೆನ್ನಲ್ಲೇ ಇನ್ನು ಮುಂದೆ ಯಾವತ್ತೂ ಸಿನಿಮಾ ಲೇಟ್ ಮಾಡಲ್ಲ ಎಂದು ಪ್ರಾಮಿಸ್ ಮಾಡಿದ್ದಾರೆ. ಯಾವುದೇ ಫ್ರೇಮ್ ನಲ್ಲೂ ರಾಜಿಯಾಗದೇ ಸಿನಿಮಾ ಮಾಡಿದ್ದೇವೆ. ಈ ಸಿನಿಮಾ ನಿಮ್ಮ ಸಿನಿಮಾ. ದಯವಿಟ್ಟು ಸಿನಿಮಾ ನೋಡಿ, ನಿಮ್ಮೆಲ್ಲಾ ಸ್ನೇಹಿತರಿಗೆ ಹೇಳಿ ಎಂದು ಧ್ರುವ ಮನವಿ ಮಾಡಿದ್ದಾರೆ.

ವಿಶೇಷವೆಂದರೆ ಜ್ಯೂ ಎನ್ ಟಿಆರ್ ಅವರ ಪ್ಯಾನ್ ಇಂಡಿಯಾ ಸಿನಿಮಾ ದೇವರ ಅಕ್ಟೋಬರ್ 10 ಕ್ಕೆ ಬಿಡುಗಡೆಯಾಗುತ್ತಿದೆ. ಅದರ ಮರುದಿನವೇ ಮಾರ್ಟಿನ್ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಧೈರ್ಯ ಮಾಡಿದೆ. ವಿಜಯದಶಮಿ ಹಬ್ಬಕ್ಕೆ ನಮ್ಮ ಕನ್ನಡ ಸಿನಿಮಾ ಕೊಡುಗೆ ನೀಡಬೇಕು ಎಂದು ಮಾರ್ಟಿನ್ ಬಿಡುಗಡೆ ಮಾಡುತ್ತಿದ್ದೇವೆ. ಕನ್ನಡ ನಾಡಿನ ಹಬ್ಬಕ್ಕೆ ಕನ್ನಡ ಸಿನಿಮಾ ರಿಲೀಸ್ ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಈಗ ದೇವರ ಎದುರು ಮಾರ್ಟಿನ್ ಗೆಲ್ಲಿಸುವ ಹೊಣೆಯೂ ಕನ್ನಡಿಗರದ್ದೇ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments