ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಹೊಸ ಸಿನಿಮಾವೊಂದು ಸದ್ದಿಲ್ಲದೇ ಸೆಟ್ಟೇರಿದೆ. ಅದ್ಧೂರಿ ಬಳಿಕ ಮತ್ತೆ ಧ್ರುವ ಸರ್ಜಾ-ಎಪಿ ಅರ್ಜುನ್ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ.
ಅದ್ಧೂರಿ ಮೂಲಕ ಧ್ರುವ ಸರ್ಜಾಗೆ ಸ್ಯಾಂಡಲ್ ನಲ್ಲಿ ಭರ್ಜರಿ ಖ್ಯಾತಿ ತಂದುಕೊಟ್ಟ ನಿರ್ದೇಶಕ ಎಪಿ ಅರ್ಜುನ್ ಆಕ್ಷನ್ ಕಟ್ ಹೇಳುತ್ತಿದ್ದರೆ, ಉದಯ್ ಕೆ ಮೆಹ್ತಾ ಬಂಡವಾಳ ಹೂಡುತ್ತಿದ್ದಾರೆ.
ಈ ಮೊದಲು ಉದಯ್ ಮೆಹ್ತಾ ನಿರ್ಮಾಣದಲ್ಲಿ ಧ್ರುವ ಸರ್ಜಾ ನಾಯಕರಾಗಿ ನಂದಕಿಶೋರ್ ನಿರ್ದೇಶನದಲ್ಲಿ ಭರ್ಜರಿ ಸಿನಿಮಾ ಘೋಷಣೆಯಾಗಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಸದ್ಯಕ್ಕೆ ಸ್ಥಗಿತವಾಗಿದೆ. ಆದರೆ ಉದಯ್ ಮೆಹ್ತಾ, ಧ್ರುವಗಾಗಿ ಮತ್ತೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದೆ.