Daily Horoscope
✕

ದರ್ಶನ್ ಜೊತೆ ಮನಸ್ತಾಪ: ದರ್ಶನ್ ಗೆ ಪ್ರಶ್ನೆ ಕೇಳಬೇಕಿದೆ ಎಂದ ಧ್ರುವ ಸರ್ಜಾ

Webdunia
ಶುಕ್ರವಾರ, 6 ಅಕ್ಟೋಬರ್ 2023 (09:35 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಗಳಾದ ದರ್ಶನ್ ಮತ್ತು ಧ್ರುವ ಸರ್ಜಾ ನಡುವೆ ಮನಸ್ತಾಪವಿದೆ ಎಂಬ ವರದಿಗಳ ಬೆನ್ನಲ್ಲೇ ಹುಟ್ಟುಹಬ್ಬದ ಸಂದರ್ಭದಲ್ಲಿ ಧ್ರುವ ಈ ಬಗ್ಗೆ ಮಾತನಾಡಿದ್ದಾರೆ.

ಇಂದು ಧ್ರುವ ಸರ್ಜಾ ಹುಟ್ಟುಹಬ್ಬವಿದೆ. ಜೊತೆಗೆ ಅಣ್ಣ ಚಿರು ಸರ್ಜಾ ಕೊನೆಯ ಸಿನಿಮಾ ರಾಜಮಾರ್ತಂಡ ಬಿಡುಗಡೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ದರ್ಶನ್ ಮತ್ತು ಧ್ರುವ ನಡುವೆ ಮನಸ್ತಾಪವಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಕಾವೇರಿ ಹೋರಾಟದ ಸಂದರ್ಭದಲ್ಲಿ ಎದಿರುಬದುರಾದರೂ ಇಬ್ಬರೂ ಮುಖ ಕೊಟ್ಟು ಮಾತನಾಡಿರಲಿಲ್ಲ. ಇದು ಎಲ್ಲರ ಗಮನ ಸೆಳೆದಿತ್ತು.

ಈ  ನಡುವೆ ದರ್ಶನ್ ಮತ್ತು ಧ್ರುವ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಇದೀಗ ಮನಸ್ತಾಪದ ಬಗ್ಗೆ ಮಾತನಾಡಿರುವ ಧ್ರುವ ‘ದರ್ಶನ್ ನಮ್ಮ ಹಿರಿಯ ನಟ, ನಮ್ಮ ಸೀನಿಯರ್ ಕೂಡಾ ಹೌದು. ದರ್ಶನ್ ಬಳಿ ಕೇಳಲು ನನಗೆ ಕೆಲವು ಪ್ರಶ್ನೆಗಳಿವೆ. ಇದನ್ನು ಅವರ ಬಳಿಯೇ ಕೇಳಬೇಕಿದೆ. ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ನನಗೂ ಸ್ವಾಭಿಮಾನವಿದೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ನಾಟಕೀಯವಾಗಿರಲು ಬರಲ್ಲ. ನನಗೆ ಕೆಲವು ಗೊಂದಲಗಳಿವೆ. ಅದರ ಬಗ್ಗೆ ದರ್ಶನ್ ಬಳಿಯೇ ಪ್ರಶ್ನೆ ಮಾಡುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments