ಧ್ರುವ ಸರ್ಜಾ ನಟನೆಯ ಸೂಪರ್‌ ಹಿಟ್‌ ಬಹದ್ದೂರ್ ಜೂನ್‌ 21ರಂದು ರೀ ರಿಲೀಸ್

Sampriya
ಭಾನುವಾರ, 16 ಜೂನ್ 2024 (12:25 IST)
Photo Courtesy X
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ ಬಹದ್ದೂರ್ ಚಿತ್ರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

ಆರ್. ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಈ ಸಿನಿಮಾ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಮರು ಬಿಡುಗಡೆಯಾಗುತ್ತಿದೆ. ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ.

ಬಹದ್ದೂರ್ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ ಇದಾಗಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು. ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು.  

ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗು ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ ಇದಾಗದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments