ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.
89 ವರ್ಷದ ಭಗವಾನ್ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಪುಟ್ಟಣ್ಣ ಕಣಗಾಲ್ ಶಿಷ್ಯರಾಗಿ ಚಿತ್ರರಂಗ ಪ್ರವೇಶಿಸಿದ್ದ ಭಗವಾನ್ ದೊರೈ ರಾಜ್ ಜೊತೆಗೂಡಿ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್ ಸೇರಿದಂತೆ ಅನೇಕ ಘಟಾನುಘಟಿಗಳಿಗೆ ನಿರ್ದೇಶನ ಮಾಡಿದ್ದಾರೆ.