Select Your Language

Notifications

webdunia
webdunia
webdunia
webdunia

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ
ಬೆಂಗಳೂರು , ಗುರುವಾರ, 21 ಜೂನ್ 2018 (08:59 IST)
ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನ ಆಯ್ಕೆ ಮಾಡಲಾಗಿದೆ.


ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 20 ರಂದು ಕರ್ನಾಟಕ ಸಚಿವಾಲಯದಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಸದ್ಯದಲ್ಲೇ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.


‘ರಾಜ್ಯ ಸರ್ಕಾರ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನಾನು ಅಕಾಡೆಮಿ ಮೂಲಕ ಸಾಧ್ಯವಾದಷ್ಟು ಕನ್ನಡ ಚಿತ್ರರಂಗದ ಹಲವಾರು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ನಾಗತಿಹಳ್ಳಿ ಚಂದ್ರಶೇಖರ್‌ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲಿಯೇ ರಣಬೀರ್ ಕಪೂರ್, ಆಲಿಯಾ ಭಟ್ ವಿವಾಹ