Webdunia - Bharat's app for daily news and videos

Install App

ಸಿನಿಮಾ ಟೀಸರ್ ರೀತಿ ಮದುವೆ ಡೇಟ್ ಬಹಿರಂಗಪಡಿಸಿದ ತರುಣ್ ಸುಧೀರ್, ಸೋನಲ್

Krishnaveni K
ಸೋಮವಾರ, 22 ಜುಲೈ 2024 (11:23 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ರಿಯಲ್ ಲೈಫ್ ನಲ್ಲಿ ಒಂದಾಗುತ್ತಿದೆ. ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂತೆರೋ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದನ್ನು ಅವರು ಇಂದು ಒಂದು ಟೀಸರ್ ಹೊರಬಿಟ್ಟು ಖಚಿತಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ತರುಣ್ ಸುಧೀರ್ ಮತ್ತು ಸೋನಲ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಇಬ್ಬರೂ ಪರೋಕ್ಷವಾಗಿ ಸುಳಿವು ನೀಡಿದ್ದರೂ ಇದುವರೆಗೆ ನೇರವಾಗಿ ಈ ಬಗ್ಗೆ ಮಾತನಾಡಿರಲಿಲ್ಲ. ಸಮಯ ಬಂದಾಗ ಖಚಿತಪಡಿಸುವುದಾಗಿ ಹೇಳುತ್ತಲೇ ಇದ್ದರು.

ಇತ್ತೀಚೆಗೆ ತರುಣ್ ಹತ್ಯೆ ಕೇಸ್ ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ನೋಡಿಕೊಂಡು ಬಂದಿದ್ದರು. ಈ ವೇಳೆ ಅವರು ಮದುವೆ ಬಗ್ಗೆ ಅಧಿಕೃತವಾಗಿ ಮಾತನಾಡಿದ್ದರು. ನಿನ್ನೆಯಷ್ಟೇ ತರುಣ್ ಮತ್ತು ಸೋನಲ್ ಇಬ್ಬರೂ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಮದುವೆ ಬಗ್ಗೆ ಇಂದು ಘೋಷಣೆ ಮಾಡುವುದಾಗಿ ಹೇಳಿದ್ದರು.

ಅದರಂತೆ ಇಂದು 11.08 ಕ್ಕೆ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಮದುವೆ ಫೋಟೋ ಶೂಟ್ ನ ಟೀಸರ್ ಹೊರಬಿಟ್ಟು ಆಗಸ್ಟ್ 11 ರಂದು ಮದುವೆಯಾಗುತ್ತಿರುವುದಾಗಿ ಸಿಹಿ ಸುದ್ದಿ ನೀಡಿದ್ದಾರೆ. ಆ ಮೂಲಕ ಇಷ್ಟು ದಿನಗಳ ಗಾಸಿಪ್ ಗೆ ತೆರೆ ಎಳೆದು ತಾವಿಬ್ಬರೂ ನಿಜ ಜೀವನದಲ್ಲೂ ಮದುವೆಯಾಗುತ್ತಿರುವುದು ನಿಜ ಎಂದು ಖಚಿತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments