ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಕಾರಣಕ್ಕೆ ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ತೆರೆ ಬಿದ್ದಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಜಾಲಿವುಡ್ ಸ್ಟುಡಿಯೋಸ್ ನಲ್ಲಿ ಬಿಗ್ ಬಾಸ್ ಸೆಟ್ ಹಾಕಲಾಗಿತ್ತು. ಆದರೆ ಸ್ಟುಡಿಯೋ ಪರಿಸರ ನಿಯಮ ಉಲ್ಲಂಘನೆ ಮಾಡಿದೆ ಎಂದು ತಹಶೀಲ್ದಾರ್ ಬೀಗ ಜಡಿದಿದ್ದರು. ಇದರಿಂದ ಬಿಗ್ ಬಾಸ್ ಶೋ ಅರ್ಧಕ್ಕೇ ನಿಂತಿದೆ. ಇದೀಗ ಸ್ಪರ್ಧಿಗಳು ಅತಂತ್ರರಾಗಿದ್ದಾರೆ.
ಇದರ ನಡುವೆ ಈ ಹಿಂದೆ ಡಿಕೆ ಶಿವಕುಮಾರ್ ಸಿನಿಮಾದವರ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಎಂದಿದ್ದ ಹೇಳಿಕೆ ವೈರಲ್ ಆಗಿತ್ತು. ಆ ಕಾರಣಕ್ಕೇ ಡಿಕೆಶಿಯೇ ಈಗ ಬಿಗ್ ಬಾಸ್ ಶೋ ನಿಲ್ಲಿಸಿರಬಹುದು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಅಭಿಪ್ರಾಯಪಟ್ಟಿದ್ದರು.
ಆದರೆ ಈಗ ಡಿಕೆ ಶಿವಕುಮಾರ್ ಇದರ ಬಗ್ಗೆ ಪ್ರತಿಕ್ರಿಯಿಸಿದ್ದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇದರ ಬಗ್ಗೆ ವಿಚಾರಣೆ ನಡೆಸಿದ್ದೇನೆ. ಜನರಿಗೆ ಮನರಂಜನೆ ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಶೋ ಮಾಡಿರ್ತಾರೆ. ಏನಾದರೂ ತಪ್ಪಾಗಿದ್ದರೆ ಸರಿಪಡಿಸಲು ಅವಕಾಶ ಕೊಡಲು ಹೇಳಿದ್ದೇನೆ ಎಂದಿದ್ದಾರೆ. ಹೀಗಾಗಿ ಬಿಗ್ ಬಾಸ್ ಮತ್ತೆ ಜಾಲಿವುಡ್ ಸ್ಟುಡಿಯೋದಲ್ಲೇ ಮುಂದುವರಿಯುವ ಸಾಧ್ಯತೆಯಿದೆ ಎನ್ನಬಹುದು.