ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

Sampriya
ಸೋಮವಾರ, 10 ನವೆಂಬರ್ 2025 (17:27 IST)
Photo Credit X
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಮಹಾನಟಿ ಸೀಸನ್ 2’ರ ಕಿರೀಟವನ್ನು ಮಂಗಳೂರಿನ ವಂಶಿ ಮುಡಿಗೇರಿಸಿಕೊಂಡಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಎಲ್ಲರ ಮನಗೆದ್ದ ವಂಶಿ ಇದೀಗ ಸೀಸನ್ 2ರ ಮಹಾನಟಿಯಾಗಿ ಹೊರ ಹೊಮ್ಮಿದ್ದಾರೆ. 

ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ ರತ್ನಕುಮಾರ್, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಟಾಫ್ 5 ಫೈನಲಿಸ್ಟ್‌ಗಳಾಗಿದ್ದರು. ಈ ಪ್ರತಿಭೆಗಳ ಮಧ್ಯೆ ವಂಶಿ ವಿಜೇತರಾಗಿ, ಫಸ್ಟ್ ರನ್ನರ್ ಅಪ್‌ ಆಗಿ ವರ್ಷಾ ಡಿಗ್ರಜೆ ಹೊರ ಹೊಮ್ಮಿದ್ದಾರೆ. ಶ್ರೀಯ ಅಗಮ್ಯ ಎರಡನೇ ರನ್ನರ್‌ ಅಪ್‌ ಆಗಿದ್ದಾರೆ.

ಇನ್ನೂ ವಿಜೇತ ವಂಶಿ ರತ್ನಾಕರ್‌ಗೆ  ₹15 ಲಕ್ಷ ಮೌಲ್ಯದ ಚಿನ್ನದ ಕಿರೀಟ ನೀಡಲಾಗಿದೆ. ಮೊದಲ ರನ್ನರ್ ಅಪ್‌ ಆಗಿರುವ ಬೆಳಗಾವಿಯ ವರ್ಷಾ ಡಿಗ್ರಜೆ ಅವರಿಗೆ ₹10 ಲಕ್ಷ ನಗದು ಬಹುಮಾನ ನೀಡಲಾಗಿದೆ. ಎರಡನೇ ರನ್ನರ್ ಅಪ್‌ ಆಗಿರುವ ಮೈಸೂರಿನ ಶ್ರೀಯ ಅಗಮ್ಯಗೆ ₹7 ಲಕ್ಷ ನಗದು ಬಹುಮಾನ ನೀಡಲಾಗಿದೆ.

ಎರಡನೇ ಸೀಸನ್‌ನ ಜಡ್ಜ್‌ಗಳಾಗಿ ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು, ತರುಣ್ ಸುಧೀರ್ ಅವರು ತೀರ್ಪುಗಾರರ ​ಸ್ಥಾನದಲ್ಲಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments