ಹೈದರಾಬಾದ್ : ಟಾಲಿವುಡ್ನ ಸೂಪರ್ ಸ್ಟಾರ್ ಚಿರಂಜೀವಿ ನಟಿಸುತ್ತಿರುವ ಸೈ.ರಾ. ಚಿತ್ರದಲ್ಲಿ ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಈ ಚಿತ್ರದಲ್ಲಿ ಸುದೀಪ್ ಅವರ ಪಾತ್ರ ಯಾವುದು ಎಂಬುದು ಬಹಿರಂಗವಾಗಿದೆ.
ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿ ಜೀವನಗಾಥೆ 'ಸೈರಾ' ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿದ್ದಾರೆ. ಇವರ ಜತೆಗೆ ಭಾರತೀಯ ಚಿತ್ರರಂಗದ ಕೆಲ ಸ್ಟಾರ್ ನಟರುಗಳು ಕೂಡ ಚಿರಂಜೀವಿ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲಿ ಕಿಚ್ಚ ಸುದೀಪ್ ಅವರು 'ಅವುಕು' ಪ್ರಾಂತ್ಯದ ರಾಜನಾಗಿ ನಟಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇತಿಹಾಸಕಾರರ ಪ್ರಕಾರ ಜುಲೈ 23, 1846 ರಂದು ಬ್ರಿಟಿಷ್ ರ ವಿರುದ್ಧ ನಡೆದ ಗಿಡ್ಡಲುರು ಬಂಡಾಯದಲ್ಲಿ ಉಯ್ಯಾಲುವಾಡ ನರಸಿಂಹ ರೆಡ್ಡಿ ಜತೆ 'ಅವುಕು' ರಾಜ ಕೈ ಜೋಡಿಸುತ್ತಾನೆ. ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ