ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ 7 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ ಕೆಲ ಸಮಯದಲ್ಲೇ ಎ14 ಆರೋಪಿ ಪ್ರದೋಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೀಗ ಪೊಲೀಸರು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಬಂಧನವಾಗಲಿದೆ. ಅಧಿಕಾರಿಗಳು ಆಕೆಯ ಮನೆಯಲ್ಲಿದ್ದು, ಇನ್ನೂ ಕೆಲವೇ ಕ್ಷಣದಲ್ಲೇ ಅರೆಸ್ಟ್ ಆಗುವ ಸಾಧ್ಯತೆಯಿದೆ.
ಚಿತ್ರದುರ್ಗಾದ ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಹತ್ಯೆ ಪ್ರಕರಣದಲ್ಲಿ ಪ್ರದೋಶ್ ಇತರ ಆರೋಪಿಗಳಿಗೆ ಸೂಚನೆ ನೀಡಿರುವುದು ಉಲ್ಲೇಖವಾಗಿದೆ. ತನಿಖೆಯಲ್ಲಿ ಪ್ರದೋಶ್ ಕುಡಾ ಪ್ರಮುಖ ಪಾತ್ರವಹಿಸಿರುವುದು ತಿಳಿದುಬಂದಿದೆ.
ಇದೀಗ ಸುಪ್ರೀಂ ಕೋರ್ಟ್ ಆದೇಶದಂತೆ ಪ್ರದೋಶ್‌ನನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಮೆಡಿಕಲ್ ಟೆಸ್ಟ್‌ಗೆ ಒಳಗಾಗಲಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಪ್ರದೋಶ್, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿದಕೊಂಡಿದ್ದ.