ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ಸಿಕ್ಕರೂ ಕೂಡಾ ಸಂಕಷ್ಟ ಮಾತ್ರ ತಪ್ಪಿಲ್ಲ. ಸದ್ಯ ದರ್ಶನ್ ಅವರು ಬೆನ್ನು ನೋವಿನಿರುವ ಕಾರಣ ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ. ಇದೀಗ ಪೊಲೀಸರು ದರ್ಶನ್ ಬಳಿ ಇದ್ದ ಗನ್ ಸೀಜ್ ಮಾಡಿದ್ದಾರೆ.
ಕಮಿಷನರ್ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ಆರ್.ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ನೋಟಿಸ್ ನೀಡಿದ್ದರೂ ಗನ್ ಜಮೆ ಮಾಡಲು ದರ್ಶನ್ ಹಿಂದೇಟು ಹಾಕಿದ್ದರು. ಇದೀಗ ಪೊಲೀಸರು ದರ್ಶನ್ ಮನೆಗೆ ತೆರಳಿ ಅವರ ಗನ್ ಸೀಜ್ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಫ್ಲ್ಯಾಟ್‌ನಲ್ಲಿದ್ದ ಗನ್ ಅನ್ನು ಸೀಜ್ ಮಾಡಲಾಗಿದೆ.
ಸಹೋದರ ದಿನಕರ್ ನಿರ್ದೇಶನದ ಬಹುನಿರೀಕ್ಷಿತ ರಾಯಲ್ ಸಿನಿಮಾವನ್ನು ತಾಯಿ ಮೀನಾ ಜತೆ ದರ್ಶನ್ ಅವರು ವೀಕ್ಷಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ರಾಯಲ್ ಸಿನಿಮಾ ತಂಡದ ಜತೆ ದರ್ಶನ್ ನಿಂತಿರುವ ಪೋಟೋ ವೈರಲ್ ಆಗಿತ್ತು.