Publish Date: Fri, 15 Jul 2022 (10:00 IST)
Updated Date: Fri, 15 Jul 2022 (10:13 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಮೂವರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.
ಇಂದು ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಸಾಧನೆಗಾಗಿ ಅನಂತ್ ನಾಗ್ ಗೆ, ಸಂಗೀತ ಕ್ಷೇತ್ರದಲ್ಲಿ ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ‍್ ಭಜಂತ್ರಿ ಮತ್ತು ತಂತ್ರಜ್ಞಾನ ಕ್ಷೇತ್ರದ ಕೊಡುಗೆಗಾಗಿ ಶರತ್ ಶರ್ಮಾಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.