Select Your Language

Notifications

webdunia
webdunia
webdunia
webdunia

ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಆಶೀರ್ವಾದ ಪಡೆದ ಡಾಲಿ ಧನಂಜಯ್

Sampriya

ಬೆಂಗಳೂರು , ಸೋಮವಾರ, 14 ಅಕ್ಟೋಬರ್ 2024 (15:22 IST)
Photo Courtesy X
ಬೆಂಗಳೂರು: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕನ್ನಡದ ನಟ ಡಾಲಿ ಅವರು ಇಂದು ದಕ್ಷಿಣ ಕನ್ನಡದಲ್ಲಿರುವ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿ, ಆಶೀರ್ವಾದ ಪಡೆದರು.

ಧನಂಜಯ್ ಜತೆ ಅವರ ಸ್ನೇಹಿತರು ಕೂಡಾ ಇದ್ದರು. ಸಿನಿಮಾ ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಧನಂಜಯ್ ಅವರು ದಕ್ಷಿಣ ಕನ್ನಡದಲ್ಲಿ ನಡೆದ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದರ ಬೆನ್ನಲ್ಲೇ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಾಲಿ ಭೇಟಿ ನೀಡಿದ್ದಾರೆ.

ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ, ಡಾಲಿ ಮತ್ತು ನವೀನ್ ಶಂಕರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.

ಅಂದಹಾಗೆ ಧನಂಜಯ್ ಅಭಿನಯದ ಅಣ್ಣ ಫ್ರಂ ಮೆಕ್ಸಿಕೋ, ಉತ್ತರಕಾಂಡ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಡಾಲಿ ಕೈಯಲ್ಲಿ ಹಲವು ಸಿನಿಮಾಗಳಿವೆ. ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಧನಂಜಯ ಅವಕಾಶ ನೀಡುತ್ತಿದ್ದಾರೆ. ಇನ್ನೂ ಶಿವಣ್ಣ ನಟನೆಯ ಹೊಸ ಸಿನಿಮಾದಲ್ಲಿ ನವೀನ್ ಶಂಕರ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಪೇಂದ್ರ ನಿರ್ದೇಶಿಸಿ, ನಟಿಸಿರುವ 'ಯುಐ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್‌