Publish Date: Wed, 23 Aug 2023 (17:42 IST)
Updated Date: Wed, 23 Aug 2023 (17:44 IST)
ಬೆಂಗಳೂರು: ಡಾಲಿ ಧನಂಜಯ್ ಇಂದು ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜೊತೆಗೆ ಜನ ಮೆಚ್ಚುವ ಕೆಲಸವನ್ನೂ ಮಾಡಿದ್ದಾರೆ.
ಹುಟ್ಟುಹಬ್ಬದ ನಿಮಿತ್ತ ಧನಂಜಯ್ ನಿನ್ನೆಯಿಂದಲೇ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಅಭಿಮಾನಿಗಳೊಂದಿಗೆ ಸಮಯ ಕಳೆದಿದ್ದಾರೆ. ಇಂದೂ ಅಲ್ಲಿ ಹಬ್ಬ ಮುಂದುವರಿದಿದೆ.
ಇದರ ಜೊತೆಗೆ ರಕ್ತದಾನ ಮಾಡಿ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಿದ್ದಾರೆ. ಅವರು ರಕ್ತದಾನ ಮಾಡುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.