Webdunia - Bharat's app for daily news and videos

Install App

ನಟ ಸುದೀಪ್‌, ಗೋಲ್ಡನ್ ಸ್ಟಾರ್‌ಗೆ ಮದುವೆ ಆಹ್ವಾನ ನೀಡಿದ ಡಾಲಿ ಧನಂಜಯ್‌

Sampriya
ಭಾನುವಾರ, 12 ಜನವರಿ 2025 (17:09 IST)
Photo Courtesy X
ಬೆಂಗಳೂರು: ಫೆ.16ರಂದು ನಟರಾಕ್ಷಸ ಡಾಲಿ ಧನಂಜಯ ಅವರು ಗೆಳತಿ ಧನ್ಯತಾ ಜತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈಗಾಗಲೇ ರಾಜ್ಯ ರಾಜಕೀಯ ನಾಯಕರನ್ನು ಮದುವೆಗೆ ಆಹ್ವಾನಿಸಿರುವ ಧನಂಜಯ್ ಇದೀಗ ಸಿನಿಮಾರಂಗದವರಿಗೆ ಮದುವೆ ಆಮಂತ್ರಣ ನೀಡುತ್ತಿದ್ದಾರೆ.

ಇಂದು ಕಿಚ್ಚ ಸುದೀಪ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಅವರ ಮನೆಯಲ್ಲಿ ಭೇಟಿಯಾಗಿ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಡಾಲಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಜ.11ರಂದು ಮೋಹಕತಾರೆ ರಮ್ಯಾಗೆ ಮದುವೆ ಪತ್ರಿಕೆ ನೀಡಿದ ಬೆನ್ನಲ್ಲೇ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ರಮೇಶ್ ಅರವಿಂದ್, 'ಬಿಗ್ ಬಾಸ್' ಖ್ಯಾತಿಯ ರಾಜೀವ್ ಸೇರಿದಂತೆ ಅನೇಕರಿಗೆ ಇಂದು (ಜ.12) ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಈಗಾಗಲೇ ಪ್ರಿಯಾಂಕ ಉಪೇಂದ್ರ ದಂಪತಿ, ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಕುಟುಂಬ, ಯುವರತ್ನ ಸಿನಿಮಾ ನಿರ್ದೇಶಕ ಸಂತೋಷ್ ಆನಂದ್‌ರಾಮ್, ಸಪ್ತಮಿ ಗೌಡ ಸೇರಿದಂತೆ ಅನೇಕರಿಗೆ ಡಾಲಿ ಮದುವೆಗೆ ಆಹ್ವಾನಿಸಿದ್ದಾರೆ.

ಅಂದಹಾಗೆ, ಮೈಸೂರಿನಲ್ಲಿ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಡಾಲಿ ಹಸೆಮಣೆ ಏರುತ್ತಿದ್ದಾರೆ. ಸ್ಯಾಂಡಲ್‌ವುಡ್ ಕಲಾವಿದರಿಗೆ ಮಾತ್ರವಲ್ಲ. ರಾಜಕೀಯ ಗಣ್ಯರು ಈ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments