ಬೆಂಗಳೂರು: ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನಟ ಡಾಲಿ ಧನಂಜಯ್ ಈಗ ತಮ್ಮ ಮದುವೆ ಆಮಂತ್ರಣ ಪತ್ರಿಕೆ ಹಂಚುವುದರಲ್ಲಿ ಬ್ಯುಸಿಯಾಗಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರಿಗೆ ಅವರ ಮನೆಗೆ ತೆರಳಿ ಡಾಲಿ ಆಹ್ವಾನವಿತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಜೊತೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆಗೂ ಭೇಟಿ ನೀಡಿ ಡಾಲಿ ಮದುವೆ ಆಹ್ವಾನ ಪತ್ರಿಕೆ ನಿಡಿದ್ದಾರೆ.
ಆಮಂತ್ರಣ ಪತ್ರಿಕೆಯ ಪೂಜೆ ಬಳಿಕ ಮೊದಲ ಕಾರ್ಡ್ ನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ. ಇಂದು ಭಾನುವಾರವಾಗಿರುವುದರಿಂದ ರಾಜಕೀಯ ನಾಯಕರು ಬಿಡುವಾಗಿದ್ದರು. ಆದರೆ ಸದ್ಯಕ್ಕೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಇಲ್ಲದೇ ಇರುವ ಕಾರಣಕ್ಕೆ ಅವರಿಗೆ ಆಹ್ವಾನ ನಿಡಲಾಗಿಲ್ಲ.
ಮೈಸೂರು ಮೂಲದ ವೈದ್ಯೆ ಧನ್ಯತಾ ಜೊತೆ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ನೆರವೇರಲಿದೆ.