Publish Date: Mon, 24 Aug 2020 (12:39 IST)
Updated Date: Mon, 24 Aug 2020 (12:41 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಪರೂಪಕ್ಕೆ ಮಾತ್ರ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಅದೂ ಅಪ್ಪಟ ಕನ್ನಡದಲ್ಲೇ ಬರೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ.
ನಿನ್ನೆ ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದರು. ನಿನಗೆ ಎಲ್ಲಾ ರೀತಿಯ ಯಶಸ್ಸು ಸಿಗಲಿ ಎಂದು ಧನಂಜಯ್ ಜತೆಗಿನ ಸುಂದರ ಕ್ಷಣದ ಫೋಟೋ ಪ್ರಕಟಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಧನಂಜಯ್ ‘ನಮ್ಮ ತಾಯಿ ಬೇರೆ ಬೇರೆಯಾಗಿರಬಹುದು. ಆದರೆ ನೀವೆಂದರೆ ನನಗೆ ಸಹೋದರನಿದ್ದಂತೆ’ ಎಂದಿದ್ದಾರೆ. ಇವರ ಈ ಬಾಂಧವ್ಯಕ್ಕೆ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.