ಬೆಂಗಳೂರು: ಈಚೆಗೆ ಡಾ.ಧನ್ಯಾತಾ ಜತೆ ಮದುವೆ ಸುದ್ದಿ ಅನೌನ್ಸ್ ಮಾಡಿದ ನಟ ಡಾಲಿ ಧನಂಜಯ್ ಅವರ ನಿಶ್ಚಿತಾರ್ಥ ಇಂದು ಸರಳವಾಗಿ ನಡೆಯಿತು. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ಧನಂಜಯ್ ಅವರು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದರು. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಅವರು ಈಚೆಗೆ ಧನಂಜಯ್ ಜತೆ ಸಿನಿಮಾ ಇವೆಂಟ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು.
ಇದೀಗ ಸದ್ದಿಲ್ಲದೆ ಈ ಜೋಡಿ ಸರಳವಾಗಿ, ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಇನ್ನೂ ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರಲು ಈ ಜೋಡಿ ನಿರ್ಧರಿಸಿದೆ.