ಬೆಂಗಳೂರು: ಡಾ.ರಾಜ್ ಕುಮಾರ್ ಸೇರಿದಂತೆ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ನೇತ್ರದಾನಕ್ಕೆ ಪ್ರೇರಕ ಶಕ್ತಿಯಾಗಿದ್ದ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಇಹಲೋಕ ತ್ಯಜಿಸಿದ್ದಾರೆ.
ನಿನ್ನೆ ಸಂಜೆ ತೀವ್ರ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಜನ ಸಾಮಾನ್ಯರು ಸೇರಿದಂತೆ ಅಪಾರ ಸಂಖ್ಯೆಯ ಜನ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ರಾಜ್ ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಭುಜಂಗ ಶೆಟ್ಟಿ ಮುಂದೆ ಡಾ.ರಾಜ್ ಹೆಸರಿನಲ್ಲೇ ನೇತ್ರದಾನ ಕೇಂದ್ರ ಸ್ಥಾಪಿಸಿದ್ದರು. ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡುವ ಕೆಲಸ ಮಾಡಿದ್ದರು.