ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಅಭಿವೃದ್ಧಿಗಾಗಿ ಡಾ. ರಾಜ್ ಕುಟುಂಬ ಇಂದು ಸಿಎಂ ಬಸವರಾಜ ಬೊಮ್ಮಾಯಿವರನ್ನು ಭೇಟಿ ಮಾಡಿದೆ.
ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಸಿಎಂ ಭೇಟಿಯಾಗಿ ಸಮಾಧಿ ಅಭಿವೃದ್ಧಿಗೆ ಮನವಿ ಮಾಡಿದರು.
ಸಮಾಧಿ ಸ್ಥಳವನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಇದಕ್ಕೆ ಸಿಎಂ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.