Select Your Language

Notifications

webdunia
webdunia
webdunia
webdunia

ಸಂಜನಾ ಗಲ್ರಾನಿಯನ್ನು ಬಿಡುತ್ತಿಲ್ಲ ಡ್ರಗ್‌ ಕೇಸ್‌: ನಟಿ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಖಾಕಿಪಡೆ ಸಿದ್ಧತೆ

Multilingual actress Sanjana Galrani

Sampriya

ಬೆಂಗಳೂರು , ಮಂಗಳವಾರ, 11 ಫೆಬ್ರವರಿ 2025 (15:28 IST)
Photo Courtesy X
ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ಬಹುಭಾಷಾ ನಟಿ ಸಂಜನಾ ಗಲ್ರಾನಿ ಈಗಾಗಲೇ ಜೈಲಿಗೆ ಹೋಗಿ ಹೊರಬಂದಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ರದ್ದಾದರೂ  ನಟಿಗೆ ಸಂಕಷ್ಟ ತಪ್ಪಿಲ್ಲ,

ಡ್ರಗ್ಸ್‌ ಕೇಸ್‌ನಲ್ಲಿ ಮತ್ತೆ ಸಂಜನಾಗೆ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬೆಂಗಳೂರು ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿಗೆ ಸಂಜನಾ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲಿ ಪ್ರಕರಣ ರದ್ದಾಗಿತ್ತು. ಆದರೆ, ಈಗ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿ ಮಾಡಿದೆ. ಈ ತಿಂಗಳ ಅಂತ್ಯದ ಒಳಗಾಗಿ ರದ್ದಾಗಿರೋ ಎಫ್‌ಐಆರ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ.

ನಗರ ಪೊಲೀಸ್ ಆಯುಕ್ತ ದಯಾನಂದ ಈ ಕುರಿತು ಮಾತನಾಡಿ, ನಟಿ ವಿರುದ್ಧ ಮೇಲ್ಮನವಿ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ವಜಾ ಬಳಿಕ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ತಯಾರಿ ನಡೆದಿದೆ ಎಂದು ಹೇಳಿದ್ದಾರೆ.

ಡ್ರಗ್‌ ಕೇಸ್‌ನಲ್ಲಿ ಸಿಸಿಬಿ ಪೊಲೀಸರು ಸಂಜನಾ ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಟಿ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಅರ್ಜಿ ತಯಾರಿಯಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಾ ಇದ್ದಂತೆ ಅರ್ಜಿ ಸಲ್ಲಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿಗೆ ಹೋಗಿ ಬಂದ್ಮೇಲೆ ಬದಲಾದ ದರ್ಶನ್ ಬಣ್ಣ, ಪ್ಯಾನ್ಸ್‌ ಫುಲ್ ಖುಷ್‌