ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಇಂದು ವಿಚಾರಣೆಗೆ ಬರಲಿದೆ.
ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರು ಸುಪ್ರೀಂಗೆ ಮನವಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಅವರ ಅರ್ಜಿಯ ವಿಚಾರಣೆ ನಡೆಸಲಿದೆ. ಪಾರ್ಟಿಗಳಲ್ಲಿ ಡ್ರಗ್ ಪೂರೈಕೆ ಮಾಡುತ್ತಿದ್ದ ಮತ್ತು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಗಳ ಜತೆ ಸಂಪರ್ಕವಿರುವ ಆರೋಪ ರಾಗಣಿ ಮೇಲಿದೆ.