Publish Date: Thu, 10 Sep 2020 (10:09 IST)
Updated Date: Thu, 10 Sep 2020 (10:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಆಳವಾದ ತನಿಖೆ ಮಾಡುತ್ತಿರುವ ಸಿಸಿಬಿ ಪೊಲೀಸರು ಮತ್ತಷ್ಟು ನಟ-ನಟಿಯರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
ಈಗಾಗಲೇ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅಲ್ಲದೆ, ಇನ್ನಷ್ಟು ಸ್ಯಾಂಡಲ್ ವುಡ್ ತಾರೆಯರು ಮಾಫಿಯಾದಲ್ಲಿ ಭಾಗಿಯಾಗಿರುವ ಶಂಕೆ ಪೊಲೀಸರಿಗಿದೆ. ಈಗಾಗಲೇ ಬಂಧಿತರಾಗಿರುವ ಡ್ರಗ್ ಪೆಡ್ಲರ್ ಗಳು ಮತ್ತಷ್ಟು ಸೆಲೆಬ್ರಿಟಿಗಳ ಜತೆಗಿರುವ ತಮ್ಮ ನಂಟಿನ ಬಗ್ಗೆ ಬಹಿರಂಗಪಡಿಸಿದ್ದಾರೆ. ಹೀಗಾಗಿ ಮತ್ತಷ್ಟು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸುವ ಸಾಧ‍್ಯತೆ ಹೆಚ್ಚಿದೆ.